Sunday, 10 December 2023

ಕರಾವಳಿಯ ಸಾವಿರದೊಂದು ದೈವಗಳು - ಕೋಟೇಶ್ವರ ನಾಯಕ


 

ಕೋಟೇಶ್ವರ ನಾಯಕ/ ಕೋಟೆರಾಯ- ಡಾ.ಲಕ್ಷ್ಮೀ ಜಿ ಪ್ರಸಾದ 


ಕುಂದಾಪುರ ಸುತ್ತ ಮುತ್ತ ಕೋಟೆರಾಯ ಎಂಬ ದೈವಕ್ಕೆ ಆರಾಧನೆ ಇದೆ.ಮಡಾಮಕ್ಕಿ ವೀರಭದ್ರ ದೇವಸ್ಥಾನದ ಪ್ರಧಾನ ದೈವ ಈತ .ಅಲ್ಲಿ ನಿಧಿಯನ್ನು ಕಾಯುವ ಕಾರ್ಯ ಈತನದು.ಈ ದೈವದ ವೃತ್ತಾಂತದಲ್ಲಿ ಇತಿಹಾಸದ ಎಳೆಗಳು ಅಡಕವಾಗಿವೆ .© ಡಾ.ಲಕ್ಷ್ಮೀ ಜಿ ಪ್ರಸಾದ್ 


ಪ್ರಚಲಿತ ಐತಿಹ್ಯದಂತೆ 1200 ವರ್ಷಗಳ ಹಿಂದೆ ಈ ಪರಿಸರವನ್ನು ಕೋಟೆರಾಯ / ಕೋಟೇಶ್ವರ ರಾಯ ಎಂಬ ಅರಸ ಆಳುತ್ತಿದ್ದ ...

 ಉಡುಪಿ ಕುಂದಾಪುರ ಕಡೆ ಕೋಟೆರಾಯ  ದೈವಸ್ಥಾನಗಳು ಇವೆ .ಇಲ್ಲಿ ಈತನಿಗೆ ನೇಮ ಕೊಟ್ಟು ಆರಾಧಿಸುತ್ತಾರೆ .


ಅರಸಮ್ಮನ ಕಾನು ಸಮೀಪದ ಬೆಟ್ಟದಲ್ಲಿ ಕೋಟೆರಾಯನ ಮೂಲ ಸ್ಥಳ ಪತ್ತೆಯಾಗಿದೆ ಅಲ್ಲಿ ಈತ ಲಿಂಗ ರೂಪಿಯಾಗಿ ನೆಲೆ ನಿಂತಿದ್ದಾನೆ.


.ಕೋಟೆರಾಯನಿಗೆ  ಡಕ್ಕೆ ಬಲಿಯಲ್ಲಿ  ಆರಾಧನೆ ಇದೆ .ಕೋಟೆರಾಯನ ಕುರಿತಾಗಿ ಡಕ್ಕೆ ಬಲಿಯಲ್ಲಿ ವೈದ್ಯರು ಹೇಳುವ ಹಾಡುಗಳಲ್ಲಿ ಈ ರೀತಿಯ ಕಥಾನಕವಿದೆ. ..ಹೆಚ್ಚಿನ ಮಾಹಿತಿಗೆ http://laxmipras.blogspot.in/2015/11/261-c.html

ಐತಿಹಾಸಿಕ ವೀರನಾಗಿರುವ ಕೋಟೇಶ್ವರ ನಾಯಕನ ಬಗ್ಗೆ ಹೆಚ್ಚಿನ ಮಾಹಿತಿ ನನ್ನ ಕರಾವಳಿಯ ಸಾವಿರದೊಂದು ದೈವಗಳು ಕೃತಿಯಲ್ಲಿದೆ 

ಚಿತ್ರ ಕೃಪೆ :ವಿಜಯಕರ್ನಾಟಕ



No comments:

Post a Comment