|
||||
copy rights reserved-© ಡಾ.ಲಕ್ಷ್ಮೀ ಜಿ ಪ್ರಸಾದ | ||||
ದಿಕ್ಪಾಲಕರನ್ನು ನೆನೆದು ಸೃಷ್ಟಿ ಜಪ ಮಾಡಲು ಆರಂಭಿಸುತ್ತಾರೆ. ದೇವರ ಎಡಭಾಗದಲ್ಲಿ ಎರಡು ಕೇಂಜವ ಹಕ್ಕಿಗಳನ್ನು ನಿರ್ಮಿಸಿದರು. ಕಲ್ಲು, ಹುಲ್ಲು, ಬೈಹುಲ್ಲಿನ ಗೂಡು, ಬಿದಿರು, ಮುಳ್ಳು ಎಲ್ಲವನ್ನು ಸೃಷ್ಟಿಸಿದರು. ಅಣ್ಣ-ತಂಗಿಯರಂತಿದ್ದ ಕೇಂಜವ ಪಕ್ಷಿಗಳು ಸಂತಾನದ ವರವನ್ನು ಸೂರ್ಯನಾರಾಯಣ ದೇವರಲ್ಲಿ ಕೇಳುತ್ತವೆ. ದೇವರ ಅನುಮತಿಯಂತೆ ಸತಿ-ಪತಿಗಳಾಗುತ್ತಾರೆ. ದೇವರ ಆಣತಿಯಂತೆ ಬಡಗು ದಿಕ್ಕಿನಲ್ಲಿರುವ ಸಾಗರದಲ್ಲಿ ಮಲ್ಲಿಗೆಯಿಂದ ಆವೃತವಾದ ಕೆರೆಯ ಮಧ್ಯದಲ್ಲಿರುವ ಅತ್ತಿಯಮರದ ಹೂವಿನ ಮಕರಂದವನ್ನು ತರಲು ಹೋಯಿತು. ಸೂರ್ಯ ಮುಳುಗುವ ಹೊತ್ತಿಗೆ ಮಕರಂದವನ್ನು ಹೀರಲು ಕೊಕ್ಕು ಹಾಕಿತು. ಸೂರ್ಯ ಮುಳುಗಿದ ಕ್ಷಣದಲ್ಲಿ ಹೂವು ಮುಚ್ಚಿಕೊಂಡಿತು. ಕೊಕ್ಕು ಹೂವಿನಲ್ಲಿ ಸಿಕ್ಕಿ ಹಾಕಿಕೊಂಡಿತು. ಇತ್ತ ಹೆಣ್ಣು ಕೇಂಜವ ಹಕ್ಕಿ ಕೇಂಜವ ಬಾರದಿರಲು ಚಿಂತೆಯಾಗಿ "ತನ್ನ ಪತಿ ಕ್ಷೇಮವಾಗಿ ಬಂದರೆ, ತಾನು ಇಡುವ ಮೊದಲ ಮೊಟ್ಟೆಯನ್ನು ನಮ್ಮನ್ನು ಸೃಷ್ಟಿಸಿದ ಸೂರ್ಯನಾರಾಯಣದೇವರಿಗೆ ನೀಡುತ್ತೇವೆ" ಎಂದು ಹರಕೆ ಹೇಳಿಕೊಳ್ಳುತ್ತಾಳೆ. ಕೇಂಜವ ತಂದ ಮಕರಂದವನ್ನು ಸ್ವೀಕರಿಸಿದ ಕೇಂಜವದಿ ಗರ್ಭ ಧರಿಸುತ್ತದೆ. ಗರ್ಭಧಾರಣೆಯ ಹತ್ತನೆಯ ತಿಂಗಳಿನಲ್ಲಿ ಆನೆಯ ತಲೆಗಿಂತ ಚಿಕ್ಕದಾದ, ಕುದುರೆಯ ತಲೆಗಿಂತ ದೊಡ್ಡದಾದ ಮೊಟ್ಟೆಯನ್ನು ಇಡುತ್ತದೆ. ಆ ಮೊಟ್ಟೆಯನ್ನು ಹೇಳಿಕೊಂಡ ಹರಕೆಯಂತೆ ದೇವರಿಗೆ ಅರ್ಪಿಸುತ್ತಾರೆ. ದೇವರು ಅದನ್ನು ದಿಂಬಿನಂತೆ ಇರಲಿ ಎಂದು ಬದಿಗೆ ಇಟ್ಟು ಗಾಳಿ ರಥವೇರಿ ಸವಾರಿಗೆ ಹೋಗುತ್ತಾರೆ. ಈ ಸಂದರ್ಭದಲ್ಲಿ ಹೊಂಚು ಹಾಕುತ್ತಿದ್ದ ನಾಗಗಳು ಮೊಟ್ಟೆಗೆ ನೋಟ ಇಟ್ಟು ಸ್ಪರ್ಶಿಸಿದಾಗ ಮೊಟ್ಟೆ ಒಡೆಯುತ್ತದೆ. ಸಿಡಿದ ತುಂಡುಗಳು ಮೇಲೆ ಆಕಾಶಕ್ಕೆ, ಕೆಳಗೆ ಪಾತಾಳಕ್ಕೆ ಉತ್ತರ ದಿಕ್ಕಿನಲ್ಲಿ ಜರ್ದೊರಿಯ ಮಗ ಜಂಬೂರಿಕುಮಾರನ ಮಡಿಲಿಗೆ ಬೀಳುತ್ತದೆ. ಅದು ಮುತ್ತು ಮಾಣಿಕ್ಯವಾಗಿ ಕಾಣಿಸುತ್ತದೆ. ಅದನ್ನು ಅವನು ಕಿವಿಯಲ್ಲಿಧರಿಸುತ್ತಾನೆ. ಸವಾರಿಗೆ ಹೋದ ದೇವರು ಹಿಂದಿರುಗಿ ಬಂದಾಗ, ಮೊಟ್ಟೆ ಒಡೆದ ವಿಚಾರ ತಿಳಿದು ಅದೆಲ್ಲಿದೆ ಎಂದು ಹುಡುಕುತ್ತಾರೆ. ಆಗ ಜಂಬೂರಿಕುಮಾರನ ಕಿವಿಯಲ್ಲಿದ್ದ ಮಾಣಿಕ್ಯ ಪುನಃ ಸಿಡಿದು ಮಣ್ಣಮುದ್ದೆಯಾಗಿ ಸಮುದ್ರಕ್ಕೆ ಬಿದ್ದು ಸಪ್ತಗಿರಿ ಪರ್ವತಕ್ಕಿಂತ ಹೆಚ್ಚು ಚಂದವಾಯಿತು. ತೆಂಕುದಿಕ್ಕಿನಲ್ಲಿ ಶೋಭಿಸುವ ಹೊಳೆಯಾಯಿತು. ಮಧ್ಯದಲ್ಲಿ ದ್ವೀಪ ಆಯಿತು. ಮೂಡುದಿಕ್ಕಿನಲ್ಲಿ ಘಟ್ಟ, ಪಡುವಣದಲ್ಲಿ ಸಮುದ್ರದ ನಡುವಿನ ಈ ಭಾಗವೇ ತುಳುನಾಡು.ಇದೇ ತುಳುನಾಡಿನಲ್ಲಿ ಕೋಟಿ ಚೆನ್ನಯರು ಮೆರೆದಾಡಿದ್ದಾರೆ ಕೇಂಜವ ಪಕ್ಷಿಗಳು ಇಟ್ಟ ಎರಡನೆಯ ಮೊಟ್ಟೆ ಸಮುದ್ರಕ್ಕೆ ಜಾರಿ ಬೀಳುತ್ತದೆ .ಅದು ನಿಂಬೆ ಹಣ್ಣಾಗಿ ತೇಲಿಕೊಂಡು ಬರುವಾಗ ಸಂಕಮಲೆಯ ಪೆಜನಾರ ಎಂಬ ಬ್ರಾಹ್ಮಣನ ಕೈಗೆ ಸಿಗುತ್ತದೆ .ಅದನ್ನು ಮನೆಗೆ ಕೊಂಡು ಹೋಗಿ ಇಡುವಾಗ ಒಂದು ಹೆಣ್ಣು ಮಗುವಾಗಿ ಅಳುತ್ತದೆ .ಮಕ್ಕಳಿಲ್ಲದ ಓಪೆತ್ತಿ- ಪೆಜನಾರ ದಂಪತಿಗಳು ಈ ಹೆಣ್ಣು ಮಗುವನ್ನು ಕೇದಗೆ ಎಂಬ ಹೆಅಸರಿತ್ತು ಮುದ್ದಿನಿಂದ ಸಾಕುತ್ತಾರೆ .ಇವಳು ೮-೧೦ ವರ್ಷವಾಗುತ್ತಾ ಬರಲು ಅವಳು ಋತುಮತಿಯಾಗುತ್ತಾಳೆ. ಆಗ ಬ್ರಾಹ್ಮಣರಲ್ಲಿ ವಿವಾಹಕ್ಕೆ ಮೊದಲು ಹುಡುಗಿ ಋತು ಮತಿಯರಾದರೆ ಅವರನ್ನು ಕಣ್ಣು ಕಟ್ಟಿ ಬೆತ್ತಲಾಗಿಸಿ ಕಾಡಿನಲ್ಲಿ ಬಿಟ್ಟು ಬರುವ ಸಂಪ್ರದಾಯವಿತ್ತು .ಆದ್ದರಿಂದ ಪೆಜನಾರ್ ಕದಾ ತಾವು ಮುದ್ದಿನಿಂದ ಸಾಕಿದ ಮಗಳನ್ನು ಬೇರೆ ದಾರಿ ತೋಚದೆ ಸಂಬಂಧಿಕರ ಮದುವೆಗೆ ಹೋಗೋಣ ಎಂದು ನಂಬಿಸಿ ಕಾಡಿನಲ್ಲಿ ಬಿಟ್ಟು ಬರುತ್ತಾರೆ. "ಸಂಕ ಮಲೆತ್ ತೊಟಕ ಬೆರನ್ದೀನ್ ಮದಿಮಾಲ್ ಆಯಿನೆಕ್ಕ್ ಕಣ್ಣುಗ್ ಕುಂಟು ಕಟ್ದು ಕಾಡುಗು ಬುಡ್ತೆರ್ ಅಪಗ ಸಾಯಿನ ಬೈದ್ಯೆ ಇನ್ಪಿನಾಯೆ ಈನ್ದುದ ಬೇಲೆಗ್ ಪೋತೆ", ಆ ಹೊತ್ತಿನಲ್ಲಿ ಸಾಯನ ಬೈದ್ಯ ಮುರ್ತೆಯ ಕೆಲಸಕ್ಕಾಗಿ ಕಾಡಿಗೆ ಬರುತ್ತಾನೆ .ಇನ್ನು ಬೆಳಕು ಸರಿಯಾಗಿ ಮೂಡಿರಲಿಲ್ಲ . ಅವನು ಮರ ಹತ್ತಿ ಕೊಯ್ಯುವಾಗ ಅದರ ಕಸ ಈ ಹುಡುಗಿಯ ತಲೆ ಮೇಲೆ ಬೀಳುತ್ತದೆ .ಆಗ ಅವಳು "ನೀನು ಗಂಡಸಾದರೆ ನನ್ನ ಅಣ್ಣ ಹೆಂಗಸಾದರೆ ನನ್ನ ಅಕ್ಕ" ಎಂದು ಹೇಳುತ್ತಾಳೆ . ಈ ಎಳೆಯ ಹುಡುಗಿಯನ್ನು ನೋಡುವಾಗ ಸಾಯನ ಬೈದ್ಯನಿಗೆ ತನ್ನ ಮುದ್ದಿನ ತಂಗಿ ದೇಯಿ ಬೈದ್ಯೆತಿಯ ನೆನಪಾಗುತ್ತದೆ . ದೇಯಿ ಬೈದ್ಯೆತಿಯನ್ನು ಸಣ್ಣದರಲ್ಲಿಯೇ ಕಾಂತನ ಬೈದ್ಯನಿಗೆ ಮದುವೆ ಮಾಡಿ ಕೊಟ್ಟಿರುತ್ತಾನೆ ಅಣ್ಣ ಸಾಯನ ಬೈದ್ಯ .ಆದರೆ ಅವಳು ಚಿಕ್ಕ ವಯಸ್ಸಿನಲ್ಲಿಯೇ ಹೆರಿಗೆ ಸಮಯದಲ್ಲಿ ಮರಣ ನ್ನಪ್ಪಿರುತ್ತಾಳೆ .ಕಣ್ಣು ಕಟ್ಟಿ ಕಾಡಿಗೆ ಬಿಟ್ಟ ಈ ಹುಡುಗಿ ಕೇದಗೆಯ ಮೇಲೆ ಅನುಕಂಪ ಪ್ರೀತಿ ಹುಟ್ಟಿ ಸಾಯನ ಬೈದ್ಯ ಅವಳ ಕೈಕಾಲು ಕಣ್ಣು ಬಿಚ್ಚಿ ತನ್ನ ಮುಂಡಾಸಿನ ಬಟ್ಟೆಯನ್ನು ಅವಳಿಗೆ ಹೊದೆಸಿ ತನ್ನ ಮನೆಗೆ ಕರೆದೊಯ್ಯುತ್ತಾನೆ .ತನ್ನ ತಂಗಿಯ ಹೆಸರಿತ್ತು ಅವಳನ್ನು ಸಾಕಿ ಸಲಹುತ್ತಾನೆ .ಕಾಡಿನಿಂದ ತಂದ ಅನಾಥ ಹುಡುಗಿಯನ್ನು ಯಾರೂ ಮದುವೆಯಾಗಲು ಮುಂದೆ ಬರಲಿಲ್ಲವೋ ಏನೋ !ವಯಸ್ಸಾಗಿರುವ ತನ್ನ ತಂಗಿಯ ಗಂಡ ಕಾಂತನ ಬೈದ್ಯನಿಗೆ ಇವಳನ್ನು ಮದುವೆ ಮಾಡಿ ಕೊಡುತ್ತಾನೆ .ಅವನು ಮದುವೆಯಾಗುವಾಗಲೇ "ತನಗೆ ವಯಸ್ಸಾಯಿತು ಮುಂದೆ ಹುಟ್ಟುವ ಮಕ್ಕಳನ್ನು ಯಾರು ನೋಡಿಕೊಳ್ಳುತ್ತಾರೆ?"ಎಂದು ಕೇಳಿದಾಗ" ಆ ಜವಾಬ್ದಾರಿ ನನಗಿರಲಿ" ಎಂದು ಹೇಳಿ ಆತನನ್ನು ಒಪ್ಪಿಸುತ್ತಾನೆ ಸಾಯನ ಬೈದ್ಯ !ಆದ್ದರಿಂದಲೇ ಇಡೀ ತುಳುಜನಪದ ಸಾಹಿತ್ಯದಲ್ಲಿ ಸಾಯನ ಬೈದ್ಯನ ಪಾತ್ರ ಸದಾ ದೇದೀಪ್ಯಮಾನವಾಗಿದೆ .ಮುಂದೆ ದೇವಿ ಬೈದ್ಯೆತಿ ಗರ್ಭಿಣಿಯಾಗುತ್ತಾಳೆ ಇತ್ತ ಪಡುಮಲೆ ಬಲ್ಲಾಳರಿಗೆ ಬೇಟೆಗೆ ಹೋಗುವ ಕನಸು ಬೀಳುತ್ತದೆ .ಅದರಂತೆ ಅವರು ನಾಗ ಬ್ರಹ್ಮರನ್ನು ನೆನೆದು ಕಾಣಿಕೆ ತೆಗೆದು ಇಟ್ಟು ಬೇಟೆಗೆ ಹೋಗುತ್ತಾರೆ ಅನೇಕ ಪ್ರಾಣಿಗಳನ್ನು ಬೇಟೆಯಾಡಿ ಅವುಗಳನ್ನು ಸಲ್ಲ ಬೇಕಾದವರಿಗೆ ಅವರವರ ಸ್ಥಾನ ಮರ್ಯಾದೆಗನುಗುಣವಾಗಿ ಹಂಚುತ್ತಾರೆ.ಬೇಟೆಯಾಡಿ ಹಿಂದೆ ಬರುವಾಗ ಬಲ್ಲಾಳರ ಕಾಲಿಗೆ ಕಾಸರಕನ ಮುಳ್ಳು ತಾಗುತ್ತದೆ. "ಕಾವೆರುದ ಮುಳ್ಳು ಕಂತುಂಡು ನಚ್ಚೋ ಬೆನ್ನಗ ರಾಮ ರಾಮ ಕಾಲನೆ ...ಯೇ ..ಏರ್ ಯಾ ಮಂದೆ ಯಾನ್ ಬಾಲೂಜಿ ಬದುಕುಜಿ ಅಂದ ಮಂದೆ ಕೆನ್ದೆರೋ ....ಯೇ" ಯಾತನೆಯಿಂದ ಬಲ್ಲಾಳರು ನಾನು ಸತ್ತು ಹೋಗುವೆ ಬದುಕಲಾರೆ ಎಂದು ನೋವಿನಿಂದ ಕೂಗಿ ನರಳುತ್ತಾರೆ . ಅವರನ್ನು ಪಲ್ಲಕ್ಕಿಯಲ್ಲಿ ಹೊತ್ತು ಕೊಂಡು ಸೇವಕರು ಅರಮನೆಗೆ ಕರೆತರುತ್ತಾರೆ .ಅರಮನೆಯ ವೈದ್ಯರು ಊರ ಪರ ಊರ ವೈದ್ಯರು ಔಷಧ ಉಪಚಾರ ಮಾಡುತಾರೆ .ಆದರೆ ಬಲ್ಲಾಳರ ಕಾಲಿಗಾದ ಗಾಯ ನಂಜು ಏರಿ ಇಡಿ ಶರೀರ ವ್ಯಾಪಿಸಿ ಅವರು ಬದುಕುಳಿಯುವುದು ಕಷ್ಟ ಎಂಬ ಹಂತಕ್ಕೆ ತಲಪುತ್ತಾರೆ . ಆಗ ಅಲ್ಲಿ ಯಾರೋ ದೇಯಿ ಬೈದ್ಯೆತಿ ಒಳ್ಳೆಯ ಮದ್ದು ಕೊಡುತ್ತಾಳೆ ಎಂದು ಅರಸ ಬಲ್ಲಾಳನಿಗೆ ಹೇಳುತ್ತಾರೆ .ಬಲ್ಲಾಳ ಕೂಡಲೇ ದೇಯಿ ಬೈದ್ಯೆತಿಯನ್ನು ಬರಹೇಳುತ್ತಾನೆ.ಆಗ ಅವಳು ಏಳು ತಿಂಗಳು ತುಂಬಿದ ಗರ್ಭಿಣಿ . ಮೊದಲು ಬರಲು ಒಪ್ಪದಿದ್ದರು ನಂತರ ಅರಸನ ನೋವನ್ನು ದೀನ ಅವಸ್ಥೆಯನ್ನೂ ನೋಡಿ ಔಷಧ ಕೊಡಲು ಒಪ್ಪುತ್ತಾಳೆ. "ಏಲ್ ಪೊರ್ತುಗು ಕಾಡದಾಲ್ ಏಲ್ ಕೊಡಿ ಮರ್ದುದೇಯಿ ತರ್ಪದೋಲು ..ಯೇ ..ಕಲ್ಲುದಾ ಗುರಿಟ್ಟು ಪಾದಿಯೋಲೆ ಮರ್ದು ಕುತ್ತುದು ಪೊಡಿ ಮಲ್ದೋಲೆ ಬೋಲ್ಲಿದಾ ಕರಡಿಗೆಡ್ ...ಯೇ .." ಬೆಳಗ್ಗಿನ ಜಾವ ಏಳು ಮಲೆಗೆ ಜನರನ್ನು ಕಳುಹಿಸಿ ದೇಯಿ ಬೈದ್ಯೆತಿ ಏಳು ಮುಷ್ಟಿಯಷ್ಟು ಔಷಧದ ಗಿಡದ ಚಿಗುರನ್ನು ತರಿಸಿ ಕುಟ್ಟಿ ಪುಡಿ ಮಾಡಿ ಬೆಳ್ಳಿ ಕರಡಿಗೆಗೆ ತುಂಬಿ ದಂಡಿಗೆ ಏರಿ ಅರಮನೆಗೆ ಬರುತ್ತಾಳೆ .ಒಳ ಬರಲು ಅಳುಕಿದ ಅವಳಲ್ಲಿ "ನೀನು ಕೊಟ್ಟ ಮದ್ದಿನಿಂದ ನಾನು ಬದುಕಿದರೆ ಇನ್ನು ಹತ್ತು ಹದಿನಾರು ಕಾಲ ಪಟ್ಟವನ್ನು ಆಳುವೆ ,ಸಲ್ಲುವ ಕಾಣಿಕೆಯನ್ನು ನಿನಗೆ ಕೊಡುವೆ ಎಂದು ಹೇಳುವರು . ದೇಯಿ ಬೈದ್ಯೆತಿ ಅನೇಕ ದಿನಗಳ ತನಕ ಅಲ್ಲಿದ್ದುಕೊಂಡು ಬಲ್ಲಾಳನ ಕಾಲಿನ ಗಾಯಕ್ಕೆ ಔಷಧಿ ಹಾಕಿ ಉಪಚಾರ ಮಾಡುತ್ತಾಳೆ .ನಿಧಾನವಾಗಿ ಗಾಯ ಮಾಗಿ ಅರಸ ಗುಣ ಮುಖನಾಗುತ್ತಾನೆ .ಆಗ ದೇಯಿ ಬೈದ್ಯೆತಿ ತನ್ನ ಮನೆಗೆ ಹೊರಡುತ್ತಾಳೆ .ತನಗೆ ಬರಬೇಕಾದ ಕಾಣಿಕೆಯನ್ನು ನೆನಪಿಸುತ್ತಾಳೆ .ಆಗ ಅರಸ ನೋವಿನ ಭರದಲ್ಲಿ ನಾನು ಏನೋ ಹೇಳಿರಬಹುದು .ಈಗ ಏನಾದರು ಕೊಡಬೇಕಾದರೆ ಮಂತ್ರಿ ಬುದ್ಯಂತ ಬರಬೇಕು ಎಂದು ಹೇಳಿದನು. ಆಗ ಕೋಪಗೊಂಡ ದೇಯಿ ಬೈದ್ಯೆತಿ ಏನು ಬೇಡ ಎಂದು ಹೇಳಿ ಹೊರಡುತ್ತಾಳೆ ಆಗ ರಾಜನ ಕಾಲಿನ ಗಾಯ ಮತ್ತೆ ಉಲ್ಬಣಿಸುತ್ತದೆ .ಆಗ ರಾಣಿ ಬಂದು ಪ್ರಾರ್ಥಿಸಲು ದೇಯಿ ಬೈದ್ಯೆತಿ ಮತ್ತೆ ಅವನನ್ನು ಗುಣಪಡಿಸುತ್ತಾಳೆ .ಆಗ ಬಲ್ಲಾಳರು ದೇಯಿ ಬೈದ್ಯೆತಿಗೆ ಆಭರಣಗಳನ್ನು ಪತ್ತೆ ಸೀರೆ ರವಕೆ ,ಸೊಂಟದ ಪಟ್ಟಿ ಮೊದಲಾದವುಗಳನ್ನು ನೀಡಿ "ಇನ್ನು ಉಳಿದದ್ದನ್ನು ನಿನ್ನ ಗರ್ಭದಲ್ಲಿರುವ ಮಗುವಿಗೆ ಕೊಡುವೆನು ಹೆಣ್ಣು ಹುಟ್ಟಿದರೆ ಅವಳಿಗೆ ಚಿನ್ನ ಬೆಳ್ಳಿ ಬೇಕಾದ್ದನ್ನು ಕೊಡುವೆನು ಗಂಡು ಮಗು ಹುಟ್ಟಿದರೆ ಅವರು ವಿದ್ಯೆ ಕಲ್ತು ದುಡಿದು ತಿನ್ನಲು ನನ್ನ ಬೀಡಿಗೆ ಬಂದರೆ ವ್ಯವಸಾಯ ಮಾಡಲು ಕಂಬಳ ಗದ್ದೆ ನೀಡುವೆನು "ಎಂದು ಮಾತು ಕೊಡುತ್ತಾರೆ. "ಪೊನ್ನ ಬಾಲೆ ಈ ಪೆದಿಯಾಂದ ಈ ನಿಕ್ಕು ಕಾರಿನ ನಡವಳಿಕೆ ಕೊರ್ಪೆಯಾನ್ ಆಣ್ ಬಾಲೆನ್ ಪೆದ್ದಿಯಾಂದ ಈ ಬೆನ್ದುನ್ಪಿ ಯಿದ್ದೋ ಬುದ್ದಿಲ ತೆರಿನ್ದಾದೆ ...ಯೇ ಎನ ಬೂಡುಗು ಬತ್ತೆರಾದ್ ಡಾದೇ ಬೆನೆರೆ ಕಂಬುಲ ಯಾನ್ ಕೊರ್ಪೆನ್ದೆರ್ ..ಯೇ.." ಮುಂದೆ ಒಂದೆರಡು ದಿನಗಳಲ್ಲಿಯೇ ದೇಯಿ ಬೈದ್ಯೆ ತಿಬಲ್ಲಾಳನ ಅರಮನೆಯಲ್ಲಿಯೇ ಎರಡು ಗಂಡು ಮಕ್ಕಳಿಗೆ ಜನ್ಮ ಕೊಡುತ್ತಾಳೆ . ಈ ಅವಳಿ ಮಕ್ಕಳೇ ಮುಂದೆ ತುಳುನಾಡಿನ ವೀರರಾಗಿ ನಾಡನ್ನು ಬೆಳಗುವರು. ಬಲ್ಲಾಳರು ಹುಟ್ಟಿದ ಮಕ್ಕಳಿಗೆ ಕೋಟೇಶ್ವರ ದೇವರನ್ನು ನೆನೆದು ಕೋಟಿ ಎಂದು, ಚೆನ್ನ ಕೇಶವನನ್ನು ನೆನೆದು ಚೆನ್ನಯ ಎಂದು ಹೆಸರಿಡುವರು .ಮಕ್ಕಳು ತಾಯಿಯ ಹಾಲು ಕುಡಿವ ಕಾಲದಲ್ಲಿಯೇ ತಾಯಿ ದೇಯಿ ಬೈದ್ಯೆತಿ ಸಾಯುತ್ತಾಳೆ .ಮಕ್ಕಳು ಬಟ್ಟಲಿನಲ್ಲಿ ಅನ್ನ ತಿನ್ನುವ ವಯಸ್ಸಿನಲ್ಲಿ ತಂದೆ ಕಾಂತನ ಬೈದ್ಯ ಸಾಯುತ್ತಾನೆ . ಈ ಮಕ್ಕಳನ್ನು ಸೋದರ ಮಾವ ಸಾಯನ ಬೈದ್ಯ ಸಾಕಿ ಸಲಹುತ್ತಾರೆ . ಪರಾಕ್ರಮಿಗಳಾಗಿ ಬೆಳೆವ ಇವರು ಅಂಗ ಸಾಧನೆಗಾಗಿ ಗುರುಗಳನ್ನು ಹುಡುಕಿಕೊಂಡು ನಾನಯರ ಗರೋಡಿಗೆ ಹೋಗಿ ನಾನ ವಿಧದ ವಿದ್ಯೆಯನ್ನು ಕಲಿಯುತ್ತಾರೆ .ಆಟ ಆಡುವಾಗ ಮಂತ್ರಿ ಬುದ್ಯಂತನ ಮಕ್ಕಳನ್ನು ಸೋಲಿಸುತ್ತಾರೆ .ದೊಡ್ದವರಾಗಲು ಬಲ್ಲಾಳನಲ್ಲಿಗೆ ಹೋಗಿ ತಮ್ಮ ತಾಯಿಗೆ ಕೊಟ್ಟ ಮಾತಿನಂತೆ ಕಂಬಳ ಗದ್ದೆಯನ್ನು ಕೊಡುವಂತೆ ಕೇಳುತ್ತಾರೆ .ಆಗ ರಾಜ ಮಂತ್ರಿ ಬುದ್ಯಂತನಲ್ಲಿ ಕೇಳಿ ಎಂದು ಹೇಳುತ್ತಾನೆ . ಇವರು ಬರುವುದನ್ನು ದೂರದಿಂದ ನೋಡಿದ ಬುದ್ಯಂತ ಕಾರಣವನ್ನು ಊಹಿಸಿ ಅಡಗಿ ಕುಳಿತು ತಾನು ಇಲ್ಲ ಎಂದು ಹೇಳಲು ಮಡದಿಗೆ ತಿಳಿಸಿದರು .ಮಾಡಿ ಹಾಗೇ ಹೇಳುತ್ತಾಳೆ. ಆಗ ಕೋಟಿ ಚೆನ್ನಯರು ಬುದ್ಯಂತರು ಬಂದಾಗ "ಕೋಟಿ ಚೆನ್ನಯರು ಕಂಬಳಕ್ಕೆ ಪ್ರಥಮ ಕಾಣಿಕೆ ಇಟ್ಟಿದ್ದಾರೆ ಎಂದು ಹೇಳಲು ಹೇಳಿ ಕಾಣಿ ಇಟ್ಟು ಬರುತ್ತಾರೆ .ಆ ತನಕ ತಾನು ಅನುಭವಿಸುತ್ತಿದ್ದ ಕಂಬಳ ಗದ್ದೆ ಇನ್ನು ಕೋಟಿ ಚೆನ್ನಯರ ಪಾಲಾಗುತ್ತದೆ ಎಂದು ಹೊಟ್ಟೆ ಕಿಚ್ಚಿನಿಂದ ಅವರು ಇಟ್ಟ ಕಾಣಿಕೆಯನ್ನು ಎಸೆದು ಕೆಟ್ಟ ಮಾತು ಆಡುತ್ತಾರೆ .ನಂತರ ಪೆರ್ಮಲೆ ಬಲ್ಲಾಳ ಇವರಿಗೆ ಕೆಳಗಿನ ಕಂಬಳಗದ್ದೆಯನ್ನು ಕೊಡುತ್ತಾರೆ . ಇವರು ವ್ಯವಸಾಯಕ್ಕೆ ಬೇಕಾದ ಎಲ್ಲ ಸಲಕರಣೆಗಳ ಸಿದ್ಧತೆ ಮಾಡುತ್ತಾರೆ .ಇವರ ಗದ್ದೆ ಉಳುಮೆ ಆಗದಂತೆ ,ಕಂಬಳ ಕೋರಿ ಆಗದಂತೆ ತಡೆಯಲು ಬುದ್ಯಂತ ಷಡ್ಯಂತ್ರಗಳನ್ನು ಮಾಡುತ್ತಾನೆ .ಬುದ್ಯಂತರು ಕಂಬಳ ಕೋರಿ ಮಾಡುವಂದೆ ಇವರು ಕೂಡಾ ಮಾಡಲು ನಿರ್ಧರಿಸುತ್ತಾರೆ .ಆಗ ಆ ದಿನ ಕಂಬಳ ಮಾಡಿದರೆ ಜಾಗ್ರತೆ ಎಂದು ಇವರನ್ನು ಬುದ್ಯಂತ ಹೆದರಿಸುತ್ತಾನೆ . ಅವನ ಬೆದರಿಕೆಕೆ ಸೊಪ್ಪು ಕಾಕದ ಕೋಟಿ ಚೆನ್ನಯರು ಅದೇ ದಿನ ಕಂಬಳ ಕೋರಿಗೆ ಸಿದ್ಧತೆ ನಡೆಸುತ್ತಾರೆ . ಆ ದಿನ ಕೋಟಿ ಚೆನ್ನಯರ ಗದ್ದೆಗೆ ಕೋಣಗಳನ್ನು ಇಳಿಸಿದಾಗ ಬುದ್ಯಂತರು ಅವರ ಕಂಬಳ ಗದ್ದೆಗೆ ಹಾರಿ ಗದ್ದೆಯಲ್ಲಿ ಹುತಿದ್ದ ದರಿಗುಂಟನ್ನು ಕಿತ್ತು ಕೋಣದ ನೆತ್ತಿಗೆ ಹೊಡೆಯಲು ಹೋಗುವರು. ಕೋಟಿಚೆನ್ನಯರು "ಒಡೆಯ ಬುದ್ಯನ್ತಾರೆ ಕೋಣಗಳಿಗೆ ಹೊಡೆಯಬೇಡಿ ಪಡುಮಲೆ ರಾಜ್ಯದಲ್ಲಿ ಕಾಡಿ ಬೇಡಿ ತಂದಿದ್ದೇವೆ ,ನಿಮಗೆ ಕೋಪ ಇದ್ದಾರೆ ನಮ್ಮ ಮೇಲೆ ತೀರಿಸಿ "ಎಂದು ಹೇಳಿ ತಡೆಯುತ್ತಾರೆ .ನಂತರ ಬುದ್ಯಂತ ಮತ್ತು ಕೋಟಿ ಚೆನ್ನಯರ ಎರಡೂ ಕಂಬಳ ಗದ್ದೆಗಳಿಗೆ ಬಿತ್ತನೆ ಕಾರ್ಯ ನಡೆಯುತ್ತದೆ .ಬುದ್ಯಂತರು ಬಿತ್ತನೆ ಮಾಡಿ ಮೂರನೇ ದಿನ ನೀರು ಬಿಡಿಸಲೆಂದು ಬೆಳಗ್ಗಿನ ಜಾವ ಕಂಬಳ ಗದ್ದೆಗೆ ಬರುತ್ತಾರೆ , ಆಗ ಅವ್ರಿಗೆ ಕೋಟಿ ಚೆನ್ನಯರ ಗದ್ದೆಯಲ್ಲಿ ಬೀಜ ಚೆನ್ನಾಗಿ ಮೊಳೆತದ್ದು ಕಾಣಿಸುತ್ತದೆ .ಅವರ ಮೇಲೆ ಅಸೂಯೆಯಿಂದ ಆ ಗದ್ದೆಯ ಬೆಳೆಯನ್ನು ನಾಶ ಮಾಡಲೆಂದು ಕಾಡಿನಿಂದ ಬದಿಯಲ್ಲ್ಲಿ ಹರಿದು ಹೋಗುವ ನೀರಿಗೆ ಒದ್ಡು ಕಟ್ಟಿ ಕೋಟಿ ಚೆನ್ನಯರ ಗದ್ದೆಗೆ ರಭಸದಿಂದ ಹರಿಯುವಾಗೆ ಮಾಡಿ ಆಗ ತಾನೇ ಮೊಳಕೆಯೊಡೆದಿದ್ದ ಬತ್ತದ ಬೀಜ ನೀರಿನಲ್ಲಿ ಕೊಚ್ಚಿಕೊಂಡು ಹೋಗುವ ಹಾಗೆ ಮಾಡಿದರು ಕಾಡ್ ದ ಬೊಲ್ಲೊಗು ಅಡ್ಡ ಕಟ್ ದೇರ್ ,ನೀರ್ ಪೋಪಿ ಸರದ್ ನ್ ಬುಡ್ತೆರ್ ನಡುಪುನಿ ಆನೆ ಬರಕೆದ ಕಣಿ ಕಡ್ತೆರ್ ಕಂಬಳಗ್ ಒಡ ದೇರ್ -ಅಯ್ಯಲ ಬಿತ್ತು ಬುರುನಾಡೆಗ್ ಮುವಳ ಬಿತ್ತು ಬೂರುನಾಡೆ ಪಾರು ಪೊಯ್ಯ ಗುರಿ ಗುಂಪು ಮುಟ್ಟದೆರ್ ಬುಲೆ ಸೇಟ್ಟ ದೆರ್ ಗಾಸಿ ಮಲ್ತೆರ್ ಪದ್ಮ ಕಟ್ಟೆಡು ಕುಲ್ಲುದೆರ್ ಗೆಂದಾರೆಗ್ ಒರಗ್ ದೇರ್ (ಸಂ :ದಾಮೋದರ ಕಲ್ಮಾಡಿ )ಅಲ್ಲಿಗೆ ಕೋಟಿ ಬಂದು ಬುದ್ಯಂತ ಬೆಳೆ ನಾಶಮಾಡಿದ್ದನ್ನೂ ನೋಡಿ ಕೋಪದಿಂದ"ನಮ್ಮ ಬೆಳೆಯನ್ನು ಹಾಳು ಮಾಡಿದ್ದೀರಿ ,ಮಳೆಗಾಲದಲ್ಲಿ ಉಣ್ಣಬೇಕಾದ ಅನ್ನವನ್ನು ಹಾಳು ಮಾಡಿದ್ದೀರಿ ,ನಾನಾಗಿದ್ದಕ್ಕೆ ಇಷ್ಟು ಸಹಿಸಿಕೊಂಡೆ ನನ್ನ ತಮ್ಮ ಬಂದಿದ್ದರೆ ಅನಾಹುತವಾಗುತ್ತಿತ್ತು "ಎಂದು ಹೇಳುತ್ತಾನೆ . ಆಗ ಬುದ್ಯಂತ ಅವರನ್ನು ಹೀನಾಯಮಾನವಾಗಿ ನಿಂದಿಸುತ್ತಾನೆ .ಆಗ ಅಲ್ಲಿಗೆ ಬಂದ ಚೆನ್ನಯ ವಂದಿಸಿ ಗೌರವ ಸೂಚಿಸಿದಾಗಲೂ ಅವನಿಗೆ ಅವಮಾನ ಮಾಡುತ್ತಾನೆ ಬುದ್ಯಂತ .ಅವನ ಮೇಲೆ ಆವೇಶದಿಂದ ಹಾರಿ ಹೊಡೆಯಲು ಹೋಗುವಾಗ ಬುದ್ಯಂತ ಓಡಿ ಹೋಗುತ್ತಾನೆ .ಅವನನ್ನು ಅದ್ದ ಕಟ್ಟಿದ ಕೋಟಿ ಹಿಡಿದು ನಿಲ್ಲಿಸುತ್ತಾನೆ .ಅವರೊಳಗೆ ಹೋರಾಟ ಆಗಿ ಬುದ್ಯಂತ ಕಂಬಳದ ನೀರಿಗೆ ಮಗುಚಿ ಬೀಳುತ್ತಾನೆ .ಅವನನ್ನು ಬಡಿದು ಸಾಯಿಸಿ ಅವನೇ ಮಾಡಿದ ನೀರ ಹೊಂಡಕ್ಕೆ ಅಡ್ಡ ಮಲಗಿಸಿ ,ಬುದ್ಯಂತರ ಮನೆಗೆ ಹೋಗಿ ಅವನ ಹೆಂಡತಿಯಲ್ಲಿ ಗದ್ದೆಗೆ ಹೋಗಿ ನೋಡುವಂತೆ ತಿಳಿಸುತ್ತಾರೆ ಮನೆಗೆ ಬಂದಾಗ ಮಾವ ಸಾಯನ ಬೈದ್ಯನಿಗೆ ಎಲ್ಲವು ಅರ್ಥವಾಗುತ್ತದೆ . ಇನ್ನು ಆ ಊರಿನಲ್ಲಿರುವುದು ಅವರಿರುವುದು ಅಪಾಯ ಎಂದರಿತ ಮಾವ ಸಾಯ ಬೈದ್ಯ "ನೀವು ಬಲ್ಲಾಳನಿಗೆ ಕೊಡಲು ಸಾಧ್ಯವಾಗದಂತಹ ವಸ್ತು ಗಳನ್ನು ಕೇಳಿ.ಕೊಡದಿದ್ದಾಗ ಅದೇ ನೆಪ ಮಾಡಿ ದೂರ ಹೊರಟು ಹೋಗಿ "ಎಂದು ಸೂಚಿಸುತ್ತಾರೆ .ಅಂತೆಯೇ ಕೋಟಿ ಚೆನ್ನಯರು ಬಲ್ಲಳನಲ್ಲಿಗೆ ಹೋಗಿ "ನೀವು ಕಂಬಳ ಗದ್ದೆ ಕೊಟ್ಟಿದ್ದೀರಿ ಆದರೆ ಬೇಕಾದ ಸಲಕರಣೆಗಳನ್ನು ಕೊಟ್ಟಿಲ್ಲ ಎಂದು ಹೇಳಿದರು ಆಗ ಬಲ್ಲಾಳ ನಿಮಗೆ ಏನು ಬೇಕು ಎಂದು ಕೇಳುತ್ತಾನೆ ಆಗ "ಬೀಡಿನ ಮುಮ್ಬಾಗದಲ್ಲಿರುವ ಸಣ್ಣಗೆಂದ ದೊಡ್ಡ ಗೆಂದ ತೆಂಗಿನ ಮರಗಳಲ್ಲಿ ಒಂದನ್ನು ಕೊಡಿ" ಎಂದು ಕೇಳುವರು. "ಅದನ್ನು ಬಿಟ್ಟು ಬೇರೆ ಕೇಳಿ" ಎಂದು ಬಲ್ಲಾಳ ಹೇಳಿದಾಗ ಸಣ್ಣ ತುಂಬಾ ದೊಡ್ಡ ತುಂಬಾ ಮಜಲು ಗದ್ದೆಗಳಲ್ಲಿ ಒಂದನ್ನು ಕೇಳುತ್ತಾರೆ .ಅದನ್ನು ಬಲ್ಲಾಳ ಕೊಡುವುದಿಲ್ಲ .ಆಗ "ಬೀಡಿನ ಹಟ್ಟಿಯಲ್ಲಿರುವ ಕಿನ್ನಿ ಕಾಳಿ ದೊಡ್ಡ ಕಾಳಿ ಹಸುಗಳಲ್ಲಿ ಒಂದನ್ನು ಕೊಡಿ" ಎಂದು ಕೋಟಿ ಚೆನ್ನಯರು ಕೇಳಿದರು ಆಗ ಬಲ್ಲಾಳ "ನೀವು ನನ್ನ ಸ್ವಾರ್ಥಕ್ಕಾಗಿ ಆಶ್ರಯದಲ್ಲಿದ್ದೀರಿ ಪ್ರೀತಿಯಿಂದ ಸಾಕಿದೆ .ಆದರೆ ಅದಕ್ಕಾಗಿ ನನ್ನ ಹನ್ನೆರಡು ರಾಣಿಯರಲ್ಲಿ ಇಬ್ಬರನ್ನು ಕೊಡಬೇಕೆಂದರೆ ಕೊಡಲು ಸಾಧ್ಯವೇ ?ಎಂದು ಬಲ್ಲಾಳರು ಹೇಳಿದಾಗ ಕೋಟಿ ಚೆನ್ನಯರು "ತಾಯಿಯನ್ತಿರುವ ರಾಣಿಯರನ್ನು ನಮಗೆ ಕಟ್ಟುತ್ತೀರಲ್ಲ್ಲ .ಇಂದಿಗೆ ನಾವು ನೀವು ಎರಡಾಯಿತು ಸಂಬಂಧ ಕಡಿಯಿತು "ಎಂದು ಹೇಳಿ ೫ ವೀಳ್ಯದೆಲೆ ಇಟ್ಟು ಬಂದರು . ಆ ಹೊತ್ತಿಗೆ ಬುದ್ಯಂತ ಸಾವಿನ ಸಮಾಚಾರವು ಬಲ್ಲಾಳನಿಗೆ ತಿಳಿಯಿತು ."ಬುದ್ಯಂತ ಸತ್ತರೆ ಸಾಯಲಿ ನೀವು ಹೋಗ ಬೇಡಿ" ಎಂದು ಬಲ್ಲಾಳ ಕೋಟಿ ಚೆನ್ನಯರಲ್ಲಿ ಕೇಳಿಕೊಳ್ಳುತ್ತಾನೆ .ಆದರೆ ಕೋಟಿ ಚೆನ್ನಯರು ಹಿಂದೆ ತಿರುಗಿ ನೋಡೆ ಚಾವಡಿ ಇಳಿದು ಹೋಗುತ್ತಾರೆ .ಅಲ್ಲಿಂದ ಮುಂದೆ ಅವರು ತಮ್ಮ ಅಕ್ಕ ಕಿನ್ನಿದಾರುವನ್ನು ಭೇಟಿ ಮಾಡುತ್ತಾರೆ .ಮುಂದೆ ಚಂದುಗಿಡಿಯ ಕುತಂತ್ರದಿಂದಾಗಿ ಪಂಜದ ಕೇಮರ ಬಲ್ಲಾಳ ಅವರನ್ನು ಬಂಧಿಸುತ್ತಾನೆ .ಅಲ್ಲಿಂದ ಅವರು ಬೆರ್ಮೆರ್ ಸಹಾಯದಿಂದ ತಪ್ಪಿಸಿಕೊಂಡು ಎನ್ಮೂರಿಗೆ ಬಂದು ಅಲ್ಲಿನ ಬಲ್ಲಾಳನ ಆಶ್ರಯದಲ್ಲಿ ಎರಡು ಗುತ್ತುಗಳು ಅಂದರೆ ಕರ್ಮಿಲಜೆ ಮತ್ತು ನೆಕ್ಕಿಲಜೆಗುತ್ತುಗಳನ್ನು ಪಡೆದು ವ್ಯವಸಾಯ ಮಾಡಿಕೊಂಡು ಇರುತ್ತಾರೆ .ಅವರು ಕೇಮಳ ಕ್ಕೆ ಹೋಗಿ ತಾಯಿ ಬೆರ್ಮೆರ್ ಗೆ ಹೇಳಿದ ಹರಿಕೆಯನ್ನು ತೀರಿಸುತ್ತಾರೆ.ಒಂದು ದಿನ ಅವರು ಬೇಟೆಗೆ ಹೋಗುತ್ತಾರೆ ಕೋಟಿ ಒಂದು ಹಂದಿಗೆ ಬಾಣ ಬಿಟ್ಟ ಆ ಹಂದಿ ಪಂಜ-ಎನ್ಮೂರುಗಳ ಗಡಿಯಲ್ಲಿ ಸತ್ತು ಬೀಳುತ್ತದೆ .ಇದರಿಂದ ವಿವಾದ ಉಂಟಾಗಿ ಪಂಜದ ಬಲ್ಲಾಳರು ಯುದ್ಧಕ್ಕೆ ಬರುತ್ತಾರೆ .ಘೋರ ಯುದ್ಧ ನಡೆಯುತ್ತದೆ ಚಂದುಗಿಡಿ ಬಿಟ್ಟ ಬಾಣ ಒಂದು ಚೆನ್ನಯನ ಕಾಲಿಗೆ ತಾಗುತ್ತದೆ.ಅವನು ಅಣ್ಣನಲ್ಲಿ "ಪಂಜದ ಪಡೆ ನಾಯಿ ಒಂದು ಕಾಲಿಗೆ ಕಚ್ಚಿತು" ಎಂದು ಹೇಳುತ್ತಾನೆ .ಆಗ ಕೋಟಿಯು "ಕಣ್ಣಿಂದ ನೋಡ ಬೇಡ ಕೈಯಿಂದ ಹಿಡಿಯಬೇಡ ಒಳಗಿನಿಂದ ತೆಗೆದು ಹೊರಗೆ ಕೊಡಹು" ಎಂದು ಹೇಳುತ್ತಾನೆ .ಅದರಂತೆ ಚೆನ್ನಯ ಕಾಲನ್ನು ಕೊಡಹಿದಾಗ ಒಂದು ಗದ್ದೆಯ ಜನ ಪೂರ್ತಿ ನಾಶವಾದರು .ಯುದ್ಧದಲ್ಲಿ ಕೋಟಿ ಚೆನ್ನಯರು ಚಂದು ಗಿಡಿಯನ್ನು ಕೊಲ್ಲುತ್ತಾರೆ .ಆಗ ಪಂಜದ ಸೈನ್ಯ ಸೋತು ಶರಣಾಗುತ್ತದೆ . ಈ ಸಂದರ್ಭದಲ್ಲ್ಲಿ ಪಂಜದ ಕೆಮರ ಬಲ್ಲಾಳನ ಜುಟ್ಟು ಹಿಡಿದು ಕೋಟಿ ಬಗ್ಗಿಸುತ್ತಾನೆ ಆಗ ಕೋಟಿಯ ಬಲ ಮರ್ಮಾಂಗಕ್ಕೆ ಬಾಣ ಒಂದು ಬಂದು ನಾಟಿತು .ಅದನ್ನು ಪಡುಮಲೆ ಬಲ್ಲಾಳನೆ ಬಿಟ್ಟಿರುತ್ತಾನೆ "ಮರ್ಮಾಂಗಕ್ಕೆ ಬಾಣ ನಾಟಿರುವುದರಿಂದ ತನ್ನ ಅಂತ್ಯ ಸಮೀಪಿಸಿದೆ" ಎಂದು ಕೋಟಿಗೆ ತಿಳಿಯಿತು .ಅಣ್ಣನನ್ನು ಅಪ್ಪಿಕೊಂಡ ಚೆನ್ನಯ "ಹುಟ್ಟಿನ ಅಮೇ ಒಂದಾಗಿರುವಾಗ ನಮಗೆ ಸಾವಿನ ಸೂತಕ ಎರಡಾಗುವುದೇ ?! ಎಂದು ಉದ್ಗರಿಸಿದನು ಕೋಟಿಯು ತಮ್ಮನ್ನು ಸಾಕಿದ ಬಲ್ಲಾಳನೆಡೆಗೆ ನೋಡಿ "ತಮಗೆ ಜಾತಿ ಭೇದ ನೋಡದೆ ಗರೋಡಿ ಕಟ್ಟಿ ಆರಾಧಿಸುತ್ತಾ ಬನ್ನಿ ನಿಮಗೆ ರಕ್ಷನೆ ಕೊಡುತ್ತೇವೆ,ನೆನೆಸಿದಲ್ಲಿ ನೆಲೆಯಾಗುತ್ತೇವೆ ,ನ್ಯಾಯಕ್ಕೆ ಇಂಬು ಕೊಡುತ್ತೇವೆ ,ಬೆಳೆಗೆ ರಕ್ಷಣ ಕೊಡುತ್ತೇವೆ "ಎಂದು ಹೇಳಿ ವೀರ ಮರಣವನ್ನಪ್ಪುತ್ತಾನೆ .ಆಗ ಚೆನ್ನಯ "ನಮಗೆ ಹೆತ್ತ ಸೂತಕ ಒಂದೇ ಆಗಿತ್ತು ಈಗ ಸತ್ತ ಸೂತಕ ಎರಡಾಗ ಬೇಕೇ ನಾನು ಕೂಡ ನಿನ್ನ ಜೊತೆ ಬರುತ್ತೇನೆ "ಎಂದು ಹೇಳಿ ದಂಬೆ ಕಲ್ಲಿಗೆ ತಲೆಯನ್ನು ಅಪ್ಪಳಿಸಿ ಅಣ್ಣನನ್ನು ಅನುಸರಿಸುತ್ತಾನೆ .ಹೀಗೆ ವೀರ ಮರಣವನ್ನಪ್ಪುವ ಸ್ವಾಭಿಮಾನಿಗಳೂ ಅತುಲ ಪರಾಕ್ರಮಿಗಳೂ ಆದ ಅವಳಿ ಸಹೋದರರಾದ ಕೋಟಿ ಚೆನ್ನಯರು ಆರಾಧ್ಯ ಶಕ್ತಿಗಳಾಗಿ ತುಳುನಾಡನ್ನು ಬೆಳಗುತ್ತಿದ್ದಾರೆ . ಇತಿಹಾಸದ ದೃಷ್ಟಿಯಿಂದ ಪಂಜದ ಕೇಮರ ಬಲ್ಲಾಳ .ಪಡುಮಲೆ ಬಲ್ಲಾಳ,ಎನ್ಮೂರು -ಪಂಜದ ಯುದ್ಧ ಗಳ ಉಲ್ಲೇಖ ಇಲ್ಲಿ ಬಹಳ ಮುಖ್ಯವಾದುದು .ಈ ಆಧಾರಗಳಿಂದ ಕೋಟಿ ಚೆನ್ನಯರ ಕಾಲವನ್ನು ಸುಮಾರು ೧೬ ನೆ ಶತಮಾನ ಎಂದು ವಿದ್ವಾಂಸರು ಅಭಿಪ್ರಾಯ ಪಟ್ಟಿದ್ದಾರೆ ಪಂಜದ ಕೂತ್ಕುಂಜದಲ್ಲಿರುವ ಗೆಳತಿ ಮಂಗಳ ಗೌರಿಯ ಅಣ್ಣ ಪರಮೇಶ್ವರ ಭಟ್ಟ್ ನಮ್ಮನ್ನು ಕೋಟಿ ಚೆನ್ನಯರ ಆದಿ ಗರೋಡಿ ಹಾಗು ಸಮಾಧಿ ಇರುವೆಡೆಗೆ ಕರೆದುಕೊಂಡು ಹೋಗಿದ್ದರು .ಮೊದಲು ನಾವು ಡಿ. ಜಿ. ನಡಕರ ಮನೆಗೆ ಹೋದೆವು .ಅಲ್ಲಿ ಕೋಟಿ ಚೆನ್ನಯರ ಬಗ್ಗೆ ಬಗ್ಗೆ ಹಿರಿಯ ವಿದ್ವಾಂಸರಾದ ಡಿ ಜಿ ನಡಕ ಅವರು ಸಾಕಷ್ಟು ಮಾಹಿತಿಯನ್ನು ನಮಗೆ ನೀಡಿದರು .ಎತ್ತರದ ಗುಡ್ಡದ ತುದಿಯಲ್ಲಿ ಆದಿ ಗರೋಡಿ ಇದೆ. ತುಸು ದೂರದಲ್ಲಿ ಕೋಟಿ ಚೆನ್ನಯರ ಸಮಾಧಿ ಇದೆ .ಕೋಟಿ ಚೆನ್ನಯರ ಸುರಿಯವನ್ನು ಹಾಕಿರುವ ಒಂದು ಮುಚ್ಚಿದ ಬಾವಿ ಅಲ್ಲಿದೆ.ಸುತ್ತ ಮುತ್ತ ಕಾಡು ಇರುವ ನಿರ್ಜನ ತಾಣ ಇದು. ಹೋಗುವಾಗ ನಾವೆಲ್ಲಾ ಬಹಳ ಸಂಭ್ರಮದಲ್ಲಿ ಹೋಗಿದ್ದೆವು .ಹೋಗುತ್ತಾ ಕೋಟಿ ಚೆನ್ನಯರ ವೀರ ಗಾಥೆಯನ್ನು ನಾನು ಹೇಳಿದೆ .ಕೋಟಿಚೆನ್ನಯರು ಬೆಳೆದ ಅವರ ಮಾವ ಸಾಯನ ಮನೆ ಗೆಜ್ಜೆ ಗಿರಿ ನಂದನ ಹಿತ್ತಿಲು ,ಪಡುಮಲೆ ಬಲ್ಲಾಳನ ಅರಮನೆಯ ಅವಶೇಷ ,ದೇಯಿ ಬೈದ್ಯೆತಿ ಹುಟ್ಟಿದ ಕೂವೆ ತೋಟ ಮನೆ ಮತ್ತು ಅದರ ವಾರಸುದಾರರು ಮತ್ತು ಅಕ್ಕ ಕಿನ್ನಿದಾರುವಿನ ದೋಲದ ಮನೆ ,ಕೋಟಿಚೆನ್ನಯರು ನೀರು ಕುಡಿದ ಬಾವಿ ,ಅವರ ಪ್ರತೀಕ ವಾಗಿರುವ ಎರಡು ತಾಳೆ ಮರಗಳು ಈಗ ಕೂಡ ಇವೆ ,ಕೋಟಿ ಚೆನ್ನಯರನ್ನು ಸಮಾಧಿ ಮಾಡಿದ ಜಾಗದಲ್ಲಿ ತುಸು ಎತ್ತರದ ಮಣ್ಣಿನ ದಿಬ್ಬ ಇತ್ತಂತೆ ,ಈಗ ಅಲ್ಲಿ ಅವರ ಸಮಾಧಿಯನ್ನು ನಿರ್ಮಿಸಿದ್ದಾರೆ .ಕೋಟಿ ಚೆನ್ನಯರ ಸಮಾಧಿ ನೋಡಿ ಹಿಂದೆ ಬರುವಾಗ ನಮಗೆ ಅರಿವಿಲ್ಲದಂತೆ ನಮ್ಮೆಲ್ಲರ ಕಣ್ಣಂಚು ತೇವಗೊಂಡಿತ್ತು .ಮನಸ್ಸು ಭಾರವಾಗಿತ್ತು. (ಮುಂದಿನವಾರ:ಭೂತವಾದ ಬೆಳ್ಳಾರೆಯ ರಾಜ ಕುಮಾರ) |
ಕರಾವಳಿಯ ಸಾವಿರದೊಂದು ದೈವಗಳು - ಡಾ.ಲಕ್ಷ್ಮೀ ಜಿ ಪ್ರಸಾದ್ ತುಳುನಾಡಿನ ಭೂತಾರಾಧನೆ/ ಭೂತ ಕೋಲ/ ದೈವಾರಾಧನೆ ಬಗ್ಗೆ ಮಾಹಿತಿ- ಡಾ.ಲಕ್ಷ್ಮೀ ಜಿ ಪ್ರಸಾದ್ Information about bhootaradhane daivas of Tulunadu
Tuesday, 30 July 2013
ತುಳುನಾಡಿನ ಅವಳಿ ವೀರರು - ಕೋಟಿಚೆನ್ನಯರು:-© ಡಾ.ಲಕ್ಷ್ಮೀ ಜಿ ಪ್ರಸಾದ
Saturday, 22 June 2013
ಬೆಕ್ಕಿನ ಕೊರಳಿಗೆ ಗಂಟೆ ಕಟ್ಟ ಬೇಕು !
ಇವತ್ತು ಬೆಳ್ಳಂಬೆಳಗ್ಗೆ ಒಂದು ನ್ಯೂಸ್ ಓದಿ ಮನಸ್ಸು ಕಲಕಿ ಹೋಯಿತು .ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಯಿತು !ದಿನ ನಿತ್ಯ ಇಂತ ವಿಚಾರ ಅಲ್ಲಿ ಇಲ್ಲಿ ನಡೆದದ್ದು ಓದ್ತಾನೆ ಇರ್ತೇವೆ .ದೆಹಲಿಯ ವಿದ್ಯಾರ್ಥಿನಿಯ ಪ್ರಕರಣದಿಂದಾಗಿ ಸ್ವಲ್ಪ ಪ್ರತಿಭಟನೆ ನಡೆಯಿತು.ತುಸು ಕಾನೂನು ಬಲ ಬಂತು ಕೂಡಾ ! ಆದರೆ ಅನ್ವಯ ಆಗಿದೆಯೇ ?ಬಲವಾದ ಕಾನೂನು ಬಂದ ನಂತರ ಕೂಡ ನಮ್ಮ ಸುತ್ತ ಮುತ್ತ ಇಂಥ ಘಟನೆಗಳು ನಡೆಯುತ್ತಲೇ ಇವೆ ಆದರೆ ಅಪರಾಧಿಯನ್ನು ಬಂಧಿಸಿದ್ದಾಗಲಿ ಶಿಕ್ಷಿಸಿದ್ದಾಗಲಿ ಎಲ್ಲೂ ಕಂಡು ಬರುವುದಿಲ್ಲ .ಸಮಾಜದಂತೆ ಕಾನುನು ರಕ್ಷಕರು ಕೂಡ ಪುರುಷರ ಪರವಾಗಿಯೇ ಇದ್ದಾರೆಯೇ? ಎಂಬ ಸಂಶಯ ನಂಗೆ ಬರುತ್ತಿದೆ .ಲೈಂಗಿಕ ಕಿರುಕುಳಗಳ ಅನೇಕ ಪ್ರಕರಣಗಳಲ್ಲಿ ಆರೋಪಿಯನ್ನು ಬಂದಿಸದೆ ಇದ್ದ ಬಗ್ಗೆ ಪ್ರತಿಭಟನೆ ನಡೆಸಿರುವ ಬಗ್ಗೆ ನಾನು ಪತ್ರಿಕೆಗಳಲ್ಲಿ ಓದಿದ್ದೇನೆ. ಇತ್ತೀಚಿಗೆ ನಮ್ಮ ಕಾಲೇಜ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ ಏರ್ಪಡಿಸಿದ್ದರು.ಇಲ್ಲಿ ಕೂಡ ಪ್ರಸ್ತಾಪಿಸಿದ್ದು ಮಹಿಳಾ ದೌರ್ಜನ್ಯ ಕಾಯ್ದೆ ಬಗ್ಗೆ .ಆದರೆ ಹೇಳಿದ್ದು ಮಾತ್ರ ಸ್ತ್ರೀಯರು ಕಾನೂನು ದುರ್ಬಳಕೆ ಮಾಡುತ್ತಿದ್ದಾರೆ.ಕಾನೂನು ದುರ್ಬಳಕೆ ಮಾಡಿದರೆ ಶಿಕ್ಷೆ ಇದೆ ಎಂದು ಮಹಿಳೆಯರನ್ನು ಭಯ ಪಡಿಸುವಂತೆ ಇತ್ತು ಅಲ್ಲಿನ ಮಾತುಗಳು !ಮಹಿಳ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ದುರ್ಬಳಕೆ ಆದೀತು ಅನ್ನುವ ಭಯ ಯಾಕೆ ? ಏನೂ ತೊಂದರೆ ಕೊಡದ ದಾರಿ ಹೋಕರ ಮೇಲೆ ಯಾರಾದರು ದೂರು ನೀಡಲು ಸಾಧ್ಯವೇ ?!ಬೇರೆ ರೀತಿಯ ಕಿರುಕುಳಕ್ಕೆ ಈ ಕಾನೂನನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ .ಬೇರೆ ಯಾವುದಾದರು ರೀತಿಯಲ್ಲಿ ತಡೆಯಲಾರದ ತೊಂದರೆ ಕೊಟ್ಟಿರಿವುದು ಇದಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ .ಅಂಥಹ ಸಂದರ್ಭದಲ್ಲಿ ಅವರ ಸಮಸ್ಯೆಯನ್ನು ನೋಡಿ ಕೊಂಡು ಸರಿಪಡಿಸಬೇಕೆ ಹೊರತು ದೂರು ಕೊಟ್ಟ ವರನ್ನೇ ಸಂಶಯಿಸುವ ಪ್ರವೃತ್ತಿ ದೂರವಾಗ ಬೇಕು.ಅತ್ಯಾಚಾರಿಗಳು ಚಿಕ್ಕಂದಿನಿಂದಲೇ ಹುಡುಗಿಯರನ್ನು ಚುಡಾಯಿಸುವ ,ಕಿರುಕುಳ ಕೊಡುವ ಪ್ರವೃತ್ತಿಯನ್ನು ಹೊಂದಿರುತ್ತಾರೆ ಎಂದು ಯಾರೋ ಬರೆದದ್ದನ್ನು ಓದಿದ್ದು ನಂಗೆ ನೆನಪಾಗುತ್ತಿದೆ .ಅಂತಹ ಕಿರುಕುಳ ಕೊಟ್ಟ ಚುಆಯಿಸಿದ ಸಂದರ್ಭದಲ್ಲಿಯೇ ಅಂತಹವರಿಗೆ ಬಲವಾದ ಶಿಕ್ಷೆ ಆದರೆ ಅವರು ಅಷ್ಟು ಮುಂದುವರಿಯಲಿಕ್ಕಿಲ್ಲ !ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು ?ಅತ್ಯಾಚಾರಿಗಳಿಗೆ ಶಿಕ್ಷೆ ಆಗುವುದಿಲ್ಲ ಇನ್ನು ಲೈಂಗಿಕ ಕಿರುಕುಳ ನೀಡಿದವರಿಗೆ ಶಿಕ್ಷೆ ಬಹಳ ದೂರದ ಮಾತು .ಕಿರುಕುಳದ ಪ್ರಕರಣಗಳು ಹೆಚ್ಚಾಗಿ ದಾಖಲಾಗುವುದೇ ಇಲ್ಲ ದೂರು ನೀಡಿದರು ಸಕ್ಷಿ ಮತ್ತು ಮೊದಲೊಂದು ಕಾರಣಗಳಿಗೆ ಡ್ರಾಪ್ ಆಗುವುದೇ ಹೆಚ್ಚು !ಆದ್ದರಿಂದ ಇದಕ್ಕೆ ಪರಿಹಾರ ಏನು ?ನಾವು ಚಿಂತಿಸಬೇಕಾಗಿದೆ .ಮಣಿಪಾಲದ ಹುಡುಗಿಯನ್ನು ಎತ್ತೊಯ್ದ ಕ್ರೂರ ವ್ಯಾಘ್ರಗಳು ನಮ್ಮ ಮನೆಯಿಂದ ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗುವುದಿಲ್ಲ ಅಂತ ಏನು ಗ್ಯಾರಂಟಿ .ಈ ವ್ಯಾಘ್ರಗಳು ಗೊಮುಖವನ್ನು ಹೊಂದಿರುವದರಿಂದ ಇವರನ್ನು ಗುರುತಿಸುವುದು ಅಸಾಧ್ಯ ಆದ್ದರಿಂದ ಬಲವಾದ ಶಿಕ್ಷೆ ಮಾತ್ರ ಇದಕ್ಕೆ ಪರಿಹಾರ ಮತ್ತು ಎಳೆಯದರಲ್ಲಿಯೇ ಇಂತ ಪ್ರವೃತ್ತಿಗೆ ಕಡಿವಾಣ ಹಾಕುವ ಕಾರ್ಯ ಆಗಬೇಕು .ಬೆಕ್ಕಿನ ಕೊರಳಿಗೆ ದೈರ್ಯ ಮಾಡಿ ಗಂಟೆ ಕಟ್ಟ ಬೇಕು .!ಏನಂತೀರಿ ನೀವು ?!
Wednesday, 5 June 2013
laxmiprasad: ...
laxmiprasad:
...: ೧ ನಮ್ಮ ನೆಲ-ಜಲ ಬೆಂಗಳೂರಿನ ಮುಖ್ಯ ರಸ್ತೆಯ ಬದಿಯಲ್ಲಿ ನಮ್ಮ ಮನೆ ಇದೆ.ಹಗಲು ರಾತ್ರಿ...
...: ೧ ನಮ್ಮ ನೆಲ-ಜಲ ಬೆಂಗಳೂರಿನ ಮುಖ್ಯ ರಸ್ತೆಯ ಬದಿಯಲ್ಲಿ ನಮ್ಮ ಮನೆ ಇದೆ.ಹಗಲು ರಾತ್ರಿ...
Sunday, 26 May 2013
laxmi prasad: ಗಿಳಿ ಬಾಗಿಲು -ಎಂಗಳಲ್ಲಿ ಅಮ್ಮಂಗೆ ಗೌರವ ವಚನ
laxmi prasad: ಗಿಳಿ ಬಾಗಿಲು -ಎಂಗಳಲ್ಲಿ ಅಮ್ಮಂಗೆ ಗೌರವ ವಚನ: ಎಂಗಳಲ್ಲಿ ಅಮ್ಮಂಗೆ ಅಬ್ಬೆ ಹೇಳಿ ಹೇಳುದು .ಇತ್ತೀಚಿಗಂಗೆ ೩೦ -೩೫ ವರ್ಷಂಗ ಳಲ್ಲಿ ಅಬ್ಬೆಯ ಬದಲು ಅಮ್ಮ ಹೇಳುವ ಪದ ರೂಡಿ ಗೆ ಬೈಂದು .ಎನ್ನ ಅಪ್ಪ ಅಮ್ಮ ಎಲ್ಲ ಅವರ ...
Friday, 24 May 2013
ಗಿಳಿ ಬಾಗಿಲು : ಎಂಗಳ ಮಕ್ಕಳ ಭಾಷೆ
ಎಂಗಳ ಭಾಷೆಲಿ ಸಣ್ಣ ಮಕ್ಕಳತ್ತರೆ ಮಾತನಾಡುವಗ ಬಳಸುವ ಪದಂಗ ಭಾರಿ ಚೆಂದ, ಆದರೆ ಎಂಗಳ ನಿತ್ಯದ ಬಳಕೆಯ ಪದಂಗಳ ಬದಲಿನ್ಗೆ ಬೇರೆ ಪದಂಗ ಇದ್ದು .ಇದೆಂತಕೆ ಹೀಂಗೆ ? ದೊಡ್ಡೋರ ಮಾತಿಲಿ ಇಲ್ಲದ್ದೆ ಇಪ್ಪ ಪದಂಗಳ ಮಕ್ಕೊಗೆನ್ತಕೆ ಹೇಳಿಕೊಡುದು ಹೇಳಿ ತುಂಬ ಸರ್ತಿ ಎನಗೆ ಅನ್ಸಿದ್ದು .ಮೂಲತ ಈ ಪದಂಗಗಳೇ ಎಂಗಳ ಭಾಷೆಲಿ ಇದ್ದದಾದಿಕ್ಕ ?ಕಾಲ ಕ್ರಮೇಣ ದೊಡ್ಡೋರ ಮಾತಿಲಿ ಈಗ ಇಪ್ಪ ಪದಂಗ ಸೇರಿಗೊಂಡವ ?ಹಾಂಗಾಗಿ ಮಕ್ಕಳತ್ತರೆ ಮಾತಾಡುವಾಗ ಮಾತ್ರ ಮೂಲ ಪದಂಗಳ ಬಳಕೆ ಹಾಂಗೆ ಒಳುತ್ತಾ?ಎನಗೆ ಗೊಂತಿಲ್ಲೆ .ಹೀಂಗೆ ಆದಿಪ್ಪ ಸಾಧ್ಯತೆ ಇದ್ದು .ಈ ಸಾಧ್ಯತೆಯ ತೀರಾ ಸಾರಾ ಸಗಟಾಗಿ ಅಲ್ಲಗಳವಲೆ ಸಾದ್ಯ ಇಲ್ಲೆ ಆನು ಗಮನಿಸಿದ ಕೆಲವು ಮಕ್ಕಳ ಭಾಷೆಯ ಪದಂಗ ಹೀಂಗೆ ಇದ್ದು
ಉಜ್ಜಿ :
ಕಿಚ್ಚಿಂಗೆ ಅಥವಾ ಬೆಶಿಗೆ ಉಜ್ಜಿ ಹೇಳುವ ಪದವ ಮಕ್ಕಳತ್ತರೆ ಮಾತನಾಡುವಗ ಬಳಸುತ್ತೆಯ . ಕಿಚ್ಚಿನತ್ತರೆ /ಬೆ ಶಿ ಇಪ್ಪಲ್ಲಿಗೆ ಹೋಗಡ ಹೇಳುಲೆ ಉಜ್ಜಿ ಹತ್ತರೆ ಹೋಗಡಾ ಹೇಳಿ ಎಂಗ ಹೇಳುತ್ತೆಯ .ಉಜ್ಜಿ ಹೇಳುದು ಉಷ್ಣ ಹೇಳುವ ಪದದ ಹವ್ಯಕ ತದ್ಭವ ರೂಪ ಆದಿಕ್ಕು .ಮಕ್ಕೊಗೆ ಉಷ್ಣ ಹೇಳಿ ಹೇಳುಲೆ ಕಷ್ಟ ಅಕ್ಕು ಹೇಳಿ ಉಜ್ಜಿ ಹೇಳುವ ಪದ ಬಳಕೆಗೆ ಬಂದಿಕ್ಕು .ಕಾಲ ಕ್ರಮೇಣ ದೊಡ್ಡೋರ ಮಾತಿಲಿ ಉಷ್ಣದ ಬದಲಿನ್ಗೆ ಬೆಶಿ ಹೇಳುವ ಪದ ರೂಡಿಗೆ ಬಂದಿರೆಕ್ಕು .ಆದರೆ ಮಕ್ಕಳತ್ತರೆ ಮಾತನಾಡುವಗ ಉಜ್ಜಿ ಹೇಳುದು ಹಾಂಗೆ ಒಳುದಿರೆಕ್ಕು .
ದೀಜಿ :
ಎಂಗಳ ಮಕ್ಕಳ ಭಾಷೇಲಿ ನೀರಿಂಗೆ ದೀಜಿ ಹೇಳುವ ಪದ ರೂಡಿಲಿ ಇದ್ದು .ನೀರಿಂಗೆ ದೀಜಿ ಹೇಳುಲೆ ಎಂತ ಕಾರಣ ಇಕ್ಕು ಹೇಳಿ ಎನಗೆ ತಲೆಗೆ ಹೊವುತ್ತಿಲ್ಲೆ . ಎಂಗಳ ಮಕ್ಕಳ ಬಾಷೆಲಿ ಬಿಟ್ರೆ ಬೇರೆಲ್ಲಿಯೂ ನೀರಿಂಗೆ ದೀಜಿ ಹೇಳಿ ಇಪ್ಪದು ಎನಗೆ ಗೊಂತಿಲ್ಲೆ .ಇದರ ಮೂಲ ರೂಪ ಎಂತಾದಿಕ್ಕು ಹೇಳಿ ಎನಗೆ ಗೊಂತಾವುತ್ತಾ ಇಲ್ಲೆ .
ಜಾಯಿ :
ಹಾಲಿನ್ಗೆ ಎಂಗಳ ಮಕ್ಕಳ ಭಾಷೆಲಿ ಜಾಯಿ ಹೇಳಿ ಹೇಳುದು . ಹಾಲು ಹೇಳುವ ಪದ ಜಾಯಿ ಹೇಳಿ ಅಪ್ಪ ಸಾಧ್ಯತೆ ಇಲ್ಲೆ .ಕ್ಷೀರ ಹೇಳುವ ಪದ ಕೂಡ ಜಾಯಿ ಹೇಳಿ ಆಗಿಪ್ಪ ಸಾಧ್ಯತೆ ಕಮ್ಮಿ ಕಾಣುತ್ತು.ಎಂಗಳ ಭಾಷೆಲಿ ಹಾಲಿನ್ಗೆ ಬೇರೆ ಎಂತಾದರು ಪದ ಇದ್ದಿಕ್ಕ ?ಇಲ್ಲದ್ದರೆ ಮಕ್ಕಳ ಭಾಷೇಲಿ ಮಾತ್ರ ಜಾಯಿ ಹೇಳುವ ಪದ ಹೇಂಗೆ ಬಂತು ?
ದಾದೆ :
ಎಂಗಳ ಮಕ್ಕಳ ಭಾಷೆಲಿ ಮನುಗು /ಒರಗು ಹೇಳುದಕ್ಕೆ ದಾದೆ ಮಾಡು ಹೇಳುವ ಪದ ಇದ್ದು .ಇದರ ಮೂಲ ರೂಪ ಎಂತಾದಿಕ್ಕು ?ಅಥವಾ ದೊಡ್ದೊರುದೆ ಮನುಗುದಕ್ಕೆ ದಾದೆ ಹೇಳಿಯೇ ಹೇಳಿಗೊಂಡಿತ್ತಿದವ ?
ಚಾಬು :
ಎರುಗು ,ಹಲ್ಲಿ ,ಹಾತೆ ,ಜೆರಳೆ ,ಮೊಂಟೆ ಮೊದಲಾದ್ದಕ್ಕೆ ಮಕ್ಕಳ ಭಾಷೇಲಿ ಚಾಬು ಹೇಳಿ ಹೇಳುದು .ತುಂಬ ಸಣ್ಣ ಮಕ್ಕಳತ್ತರೆ ಎಲ್ಲದಕ್ಕೂ ಚಾಬು ಹೇಳಿಯೇ ಹೇಳುದು . ಮಕ್ಕ ರಜ್ಜ ದೊಡ್ಡಪ್ಪಗ ಎರುಗು ಚಾಬು ಹಲ್ಲಿ ಚಾಬು ಇತ್ಯಾದಿ ಇನ್ನೊಂದು ಪದ ಸೇರ್ಸಿ ಹೇಳ್ತವು .ಹಾವಿಂಗೆ ಕೂಡ ಚಾಬು ಹೇಳಿಯೇ ಹೇಳುದು .ಬಹುಷ ಹಾವು ಹೇಳುವ ಪದವೇ ಚಾಬು ಪದದ ಮೂಲ ರೂಪ ಆದಿಕ್ಕು ಹೇಳಿ ಎನಗೆ ಅನ್ಸುತ್ತು .ಇದಲ್ಲದೆ ಬೂಚು ,ತಾಚಿ ಮೊದಲಾಗಿ ಸುಮ್ಮಾರು ವಿಶಿಷ್ಟ ಪದಂಗಳ ಬಳಕೆ ಇದ್ದು .ದೊಡ್ಡೋರ ಮಾತಿಲಿ ಇಲ್ಲದ್ದ ಇಂತ ಪದಂಗ ಮಕ್ಕಳ ಭಾಷೇಲಿ ಮಾತ್ರ ಹೆಂಗೆ ಬಂತು ?ತಿಳುದೋರು ಹೇಳಿದರೆ ಸಂತೋಷ
ಇನ್ನೊಂದರಿ ಕಾಂಬ
ನಮಸ್ಕಾರ - ಡಾ.ಲಕ್ಷ್ಮಿ ಜಿ ಪ್ರಸಾದ
Monday, 20 May 2013
ಗಿಳಿ ಬಾಗಿಲು(ಹವ್ಯಕ ಅಂಕಣ ) - ಎಂಗಳ ಭಾಷೆ ರಜ್ಜ ಬೇರೆ
.ಮೊನ್ನೆ ಫೇಸ್ ಬುಕ್ಕಿಲಿ ಎನ್ನ ಸಣ್ಣಾದಿಪ್ಪಗಣ ಗೆಳೆಯ(ನೆಂಟ್ರು ) ಸೂರ್ಯನಾರಾಯಣ ತೆಂಕ ಬೈಲು (ಈಗ ಅವ ದೇಲಂತ ಬೆಟ್ಟಿನ ದೊಡ್ಡ ಶಾಲೆ ಮಾಷ್ಟ್ರ ) ಹವ್ಯಕ ಭಾಷೆಲಿ ಬರೆ ಓದುಲೆ ಕೊಶಿ ಆವುತ್ತು ಹೇಳಿ ಸಲಹೆ ಕೊಟ್ಟ .ಸುಮಾರು ಸಮಯಂದ ಆನು ಹವ್ಯಕ ಭಾಷೇಲಿ ರಜ್ಜ ಏನಾರು ಎಂತಾದರು ಬರೆಯಕ್ಕು ಹೇಳಿ ಜಾನ್ಸಿಗೊಂಡು ಇತ್ತಿದೆ.ಅದಕ್ಕೆ ಸೂರ್ಯ ನಾರಾಯಣನ ಮಾತು ಬಲ ಕೊಟ್ಟತ್ತು ಹಾಂಗಾಗಿ ಹವ್ಯಕ ಭಾಷೆಲಿ ಬರವಲೆ ಸುರು ಮಾಡಿದ್ದೆ
ಆನು ನಾಲ್ಕು ವರ್ಷ ಮೊದಲು ಬೆಳ್ಳಾರೆ ಗವರ್ಮೆಂಟು ಕೋಲೇಜಿಲಿ ಕನ್ನಡ ಲೆಕ್ಚರು ಕೆಲಸಕ್ಕೆ ಸೇರಿದ ಒಂದೆರಡು ದಿನಂಗಳಲ್ಲಿಯೇ ಅಲ್ಯನೋ(ಣ) ರ ಹವ್ಯಕ ಭಾಷೆಗೂ ಎಂಗಳ ಹವ್ಯಕ ಭಾಷೆಗೂ ತುಂಬಾ ವ್ಯತ್ಯಾಸ ಇದ್ದು ಹೇಳಿ ಎನಗೆ ಗೊಂತಾತು .ಅಲ್ಯನೋರ ಹವ್ಯಕ ಭಾಷೇಲಿ ಕನ್ನಡದ ಪದಂಗ ಜಾಸ್ತಿ ಇದ್ದು .ಅದರ ಮೂಡ್ಲಾಗಿ (ಹವ್ಯಕ) ಭಾಷೆ ಹೇಳಿಹೇಳ್ತವು .ಅವು ಎನಗೆ ಹೇಳುದರ ಎನಿಗೆ ಹೇಳಿ ಹೇಳ್ತವು .ನಮ್ಮ ಉಂಡೆಯ ಅವು ಕಡುಬು ಹೇಳಿ ಹೇಳ್ತವು .ಹೀಂಗೆ ತುಂಬಾ ಕಡೆ ಅವರ ಭಾಷೆ ನಮ್ಮ ಭಾಷೆಂದ ಬೇರೆ ತರ ಇದ್ದು.ಪಡ್ಲಾಗಿ ಭಾಷೆಲಿದೆ ರಜ್ಜ ಬೇರೆ ತರ ಇಪ್ಪ ಹವ್ಯಕ ಭಾಷೆಯ ಒಂದು ವಿಧ ಅಲ್ಲಿನ ಕೆಲವು ಕುಟುಂಬಗಳಲ್ಲಿ ಅಲ್ಲಿ ಇದ್ದು .ಹೋವುಕೆ ಬರುಕೆ ಇತ್ಯಾದಿ ಪದಂಗ ಅದರಲ್ಲಿ ಇದ್ದು .ಅದು ರಜ್ಜ ಭೈರಂಗಳ ಕನ್ನಡ ಭಾಷೆಯ ಹಾಂಗೆ ಇದ್ದು .
ಉತ್ತರ ಕನ್ನಡದೋರ ಹವ್ಯಕ ಭಾಷೆಗೂ ಎಂಗಳ ಭಾಷೆಗೂ ತುಂಬಾ ವ್ಯತ್ಯಾಸ ಇಪ್ಪದು ಎನಗೆ ಗೊಂತಿತ್ತು .ಬೆಳ್ಳಾರೆಗೆ ಹೋದ ಮೇಲೆ ಅಲ್ಯಣ ಮೂಡ್ಲಾಗಿ ಭಾಷೆ ಮತ್ತೆ ಅದರ ಇನ್ನೊಂದು ವಿಧ ಇಪ್ಪದು ಗೊಂತಾತು ಎನಗೆ .ಮತ್ತೆ ಕೊಡೆಯಾಲ ಕಾಸರಗೋಡು ವಿಟ್ಲ ಪುತ್ತೂರು ಮೊದಲಾದ ಜಾಗೆಗಳ ಹವ್ಯಕ ಭಾಷೆದೆ ಎಂಗಳ ಹವ್ಯಕ ಭಾಷೆ(ಕೋಳ್ಯೂರು ಸೀಮೆದು )ದೆ ಒಂದೇ ರೀತಿ ಇಕ್ಕು ಹೇಳಿ ಆನು ಗ್ರೇಶಿತ್ತಿದೆ.ಆದರೆ ಒಪ್ಪಣ್ಣನ ಒಪ್ಪಂಗೊ ಓದುತ್ತಾ ಇದ್ದಾಂಗೆ ಎಂಗಳ ಭಾಷೆಗೂ ಅಲ್ಲಿ ಇಪ್ಪ ಭಾಷೆಗೂ ತುಂಬ ವ್ಯತ್ಯಾಸ ಇಪ್ಪದರ ನೋಡಿ ಎಂಗಳ ಭಾಷೆ ರಜ್ಜ ಬೇರೆ ಹೇಳಿ ಗೊಂತಾತು ಎನಗೆ .ಅದರಲ್ಲಿ ಒ ಕಾರದ ಬಳಕೆ ಹೆಚ್ಚು ಇದ್ದು .ಅಭಿನಂದನೆಗೊ ,ಒಪ್ಪಂಗೊ ಮಂತ್ರಂಗೊ ,ಗಾದೆಗೊ ಇತ್ಯಾದಿ .ಎಂಗಳ ಭಾಷೆಲಿ ಇಂತ ಕಡೆ ಒ ಕಾರ ಇಲ್ಲೆ .ಅಭಿನಂದನೆಗ ಗಾದೆಗ ,ಮಂತ್ರಗ ಹೇಳಿ ಇರ್ತು .
ಮತ್ತೆ ಎಂಗಳ ಭಾಷೆಲಿ ಹೇತು ,ಹೇದು ಹೇದರೆ ಕೇಟವು ಇಂತ ಪದಂಗ ಇಲ್ಲೆ ಇದರ ಬದಲು .ಹೇಳಿತ್ತು ,ಹೇಳಿ ,ಹೇಳಿದರೆ ಕೇಳಿದವು ಹೇಳಿ ಇದ್ದು
ಆನು ಭಾಷಾ ತಜ್ಞೆ ಅಲ್ಲ . ಎನ್ನ ತಲೆಗೆ ಬಂದದರ ಇಲ್ಲಿ ಬರದ್ದೆ .ಇನ್ನು ಮುಂದಣ ದಿನಂಗಳಲ್ಲಿದೆ ಎನಗೆ ಬರೆಯಕ್ಕು ಹೇಳಿ ಎನ್ಸಿದ್ದರ ಎಂಗಳ ಹವ್ಯಕ ಭಾಷೆಲಿ ಬರೆತ್ತೆ .ನಿಂಗ ಎಲ್ಲ ತಿಳುದೋರು ಹಂಸ ಕ್ಷೀರ ನ್ಯಾಯದ ಹಾಂಗೆ (ನೀರು ಸೇರ್ಸಿದ ಹಾಲಿನ ಹಂಸದ ಎದುರು ಮಡುಗಿದರೆ ಅದು ಹಾಲಿನ ಮಾತ್ರ ಕುಡುದು ನೀರಿನ ಹಾಂಗೆ ಬಿಡ್ತಡ !ಇದೊಂದು ಕವಿ ಸಮಯ ) ಒಳ್ಳೆದರ ಮಾತ್ರ ತೆಕ್ಕೊಂಡು ಬೆನ್ನು ಕಟ್ಟಕ್ಕು ಹೇಳಿ ಕೇಳಿಗೊಂಡಿದೆ
ಇನ್ನೊಂದರಿ ಕಾಂಬ ನಮಸ್ಕಾರ
- ಡಾ.ಲಕ್ಷ್ಮಿ ಜಿ ಪ್ರಸಾದ
Friday, 17 May 2013
Subscribe to:
Posts (Atom)